ಭಾರತ ದರ್ಶನ

250.00

In stock

Category:

250.00

Description

ಭಾರತದಲ್ಲಿ ಜನಿಸಿದ ನಮಗೆ ನಮ್ಮ ದೇಶ ಎಷ್ಟು ಶ್ರೇಷ್ಠವಾದದ್ದು ಎಂದು ತಮ್ಮ ‘ಭಾರತ ದರ್ಶನ’ ಪ್ರವಚನಗಳ ಮುಖೇನ ದರ್ಶನ ಮಾಡಿಸಿದ ಮಹನೀಯರು ಬಿ. ವಿ. ವಿದ್ಯಾನಂದ ಶೆಣೈ. ಶೆಣೈ ಅವರು. ವಿದ್ಯಾನಂದ ಶೆಣೈ ಅವರ ಪ್ರವಚನ ಕೇಳುವುದೆಂದರೆ ಕರ್ಣಾನಂದಕರ ಸಂಗೀತವನ್ನು ಅಂತರಾಳದಿಂದ ಅನುಭಾವಿಸುವಂತಹ ಒಂದು ಅಪೂರ್ವ ಸಂಯೋಗ. ಅವರ ವಿದ್ವತ್ತು, ಸ್ಪಷ್ಟತೆ, ಇಂಪಾದ ಧ್ವನಿ, ಅಪೂರ್ವ ಸಾಹಿತ್ಯಕ ಮೌಲ್ಯ ಮತ್ತು ಅವೆಲ್ಲವನ್ನೂ ಮೀರಿಸುವಂತಹ ಅದಮ್ಯ ದೇಶಭಕ್ತಿ, ಕೇಳುಗನೊಂದಿಗೆ ಅಪೂರ್ವ ಅನುಭೂತಿ ಇವೆಲ್ಲಾ ಇನ್ನಿಲ್ಲದಂತೆ ನಮ್ಮ ಹೃನ್ಮನಗಳನ್ನು ಸೆಳೆಯುತ್ತವೆ.

ವಿದ್ಯಾನಂದ ಶೆಣೈ ಅವರ ‘ಭಾರತ ದರ್ಶನ’ದಲ್ಲಿ, “ಭಾರತದ ಮಾತೃಸ್ವರೂಪ, ಪಿತೃಸ್ವರೂಪ, ಗುರು ಸ್ವರೂಪಗಳ ಪರಿಚಯ; ನದಿ ಪರ್ವತಗಳ ಸುತ್ತ ಎದ್ದುನಿಂತ ಏಕಾತ್ಮತೆಯ ಪ್ರತೀಕಗಳು; ಮತ್ತು ಪ್ರಮುಖ ತೀರ್ಥಗಳು, ಅಗಲಿದ ಕ್ಷೇತ್ರಗಳು, ಅಖಂಡ ಭಾರತದ ಆರಾಧನೆ” ಎಂಬ ವಿಷಯಗಳ ಕುರಿತಾಗಿ ಗೀತಭಾರತಿಯ ಕ್ಯಾಸೆಟ್ಟುಗಳು ಮತ್ತು ಸಿ ಡಿ ಗಳ ಮೂಲಕ ಕನ್ನಡಿಗರ ಮನೆ ಮನೆಗಳನ್ನೂ ತಲುಪಿ ಅಲ್ಲಿನ ಹೃದಯಗಳನ್ನು ಪುನೀತಗೊಳಿಸಿದ್ದಾರೆ. ಇದು ಕನ್ನಡ ಭಾಷೆಯಲ್ಲಿ ಲಭ್ಯವಿರುವಷ್ಟೇ ಸುಂದರವಾಗಿ ಇಂಗ್ಲಿಷ್, ಹಿಂದೀ ಭಾಷೆಗಳಲ್ಲೂ ಲಭ್ಯವಿದೆ. ಭಾರತ ದರ್ಶನ ಉಪನ್ಯಾಸ ಮಾಲಿಕೆಯ ಮೂಲಕ ಅಪ್ರತಿಮ ಖ್ಯಾತಿ ಗಳಿಸಿದ್ದ ಅವರು ರಾಜ್ಯದಲ್ಲಿ 1100ಕ್ಕೂ ಅಧಿಕ ಉಪನ್ಯಾಸ ನೀಡಿದ್ದರು. ಅವರು ಹೊರತಂದಿದ್ದ ‘ಭಾರತ ದರ್ಶನ’ ಧ್ವನಿ ಸುರುಳಿಗಳು 60,000ಕ್ಕೂ ಹೆಚ್ಚು ಸೆಟ್ಟುಗಳ ಮಾರಾಟ ದಾಖಲೆಯನ್ನು ನಿರ್ಮಿಸಿವೆ.

Specification

Additional information

author-name

language

Kannada

Main Menu

ಭಾರತ ದರ್ಶನ

250.00

Add to Cart